ಶಿವಮೊಗ್ಗ,ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಮಾಜಿ ಸಿದ್ದರಾಮಯ್ಯ ಮಂತ್ರಿಮಂಡಲದಲ್ಲಿದ್ದ ಮಧು ಬಂಗಾರಪ್ಪ ಅವರಿಗೆ ಮತ್ತೊಮ್ಮೆ ಮಂತ್ರಿ ಸ್ಥಾನ ಸಿಕ್ಕಿದೆ.
ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರ ಅಭಿಮಾನಿಗಳು ಸಂಭ್ರಮಾಚಾರಣೆ ಮಾಡಿದ್ದಾರೆ.

ಮುಖ್ಯಮಂತ್ರಿಗಳಾದ ಡಿಕೆಶಿ ಸಚಿವರನ್ನಾಗಿ ಮಾಡಿದ್ದ ಬಂಗಾರಪ್ಪ ಋಣ ತೀರಿಸಿದ ಶಿಷ್ಯ! ಶಿವಮೊಗ್ಗ ಜಿಲ್ಲೆ ಹಾಗೂ ಈಡಿಗ ಸಮುದಾಯದ ಕೋಟಾ ಅಡಿಯಲ್ಲಿ ಮಧು ಬಂಗಾರಪ್ಪ ಅವರನ್ನು ಮತ್ತೊಮ್ಮೆ ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂದಿನ ಅವಧಿಯಲ್ಲಿ ಮಧು ಬಂಗಾರಪ್ಪ ಅವರು ನಿರ್ವಹಿಸಿದ ಕಾರ್ಯವೈಖರಿಯ ವರದಿಯ ಪಟ್ಟಿ ಹೈಕಮಾಂಡ್ ನ ಮನಸ್ಸು ಗೆದ್ದಿದ್ದು, ಮಧು ಬಂಗಾರಪ್ಪ ಅವರ ವಿಚಾರದಲ್ಲಿ ಈ ನಿರ್ಣಯವನ್ನು ಕೈಗೊಳ್ಳಲು ಕಾರಣವಾಯಿತು.
ಇದಕ್ಕೆ ಮತ್ತೊಂದು ಕಾರಣ ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಅವರ ಪುತ್ರ ಜೊತೆಗೆ ಎನ್ನುವುದರ ಜೊತೆಗೆ, ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮೊದಲ ಬಾರಿಗೆ ಸಚಿವರನ್ನಾಗಿ ಮಾಡಿದ್ದರು.

ರಾಜಕೀಯ ಗುರುವಿನ ಋಣವನ್ನು ತೀರಿಸಲು ಡಿ.ಕೆ.ಶಿವಕುಮಾರ್ ಅವರು ಮಧುಬಂಗಾರಪ್ಪ ಅವರನ್ನು ತಮ್ಮ ಸಚಿವ ಸಂಪುಟದಲ್ಲೂ ಮಂತ್ರಿಯನ್ನಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪಟ್ಟಿಯು ಪ್ರಕಟಗೊಳ್ಳುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಎನ್.ರಮೇಶ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖರು ಬೆಂಗಳೂರಿನಲ್ಲಿರುವ ಮಧುಬಂಗಾರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.






