ಬೆಳಗಾವಿ | “ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ” : ಸಚಿವ ಮಧು ಬಂಗಾರಪ್ಪ

ಬೆಳಗಾವಿ

ಬೆಳಗಾವಿ, ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ವತಿಯಿಂದ ಬೆಳಗಾವಿ ಸುವರ್ಣಸೌಧದ ಬಳಿ ಹಮ್ಮಿಕೊಂಡಿದ್ದ “ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ”ದ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ ಅವರೊಂದಿಗೆ ಶಿಕ್ಷಣ ಸಚಿವರು ಭೇಟಿ ನೀಡಿ, ಅಹವಾಲು ಸ್ವೀಕರಿಸಿದರು.

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. 1995 ರಿಂದ 2005 ರವರೆಗಿನ ಕನ್ನಡ ಶಾಲೆಗಳು ಮತ್ತು ಕಾಲೇಜುಗಳಿಗೆ ವೇತನಾನುದಾನ ನೀಡುವ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ, ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡುವ ಪ್ರಮಾಣಿಕ ಪ್ರಯತ್ನದಿಂದ ನಿಮ್ಮ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಎಸ್.ವಿ ಸಂಕನೂರ, ಡಿ.ಟಿ ಶ್ರೀನಿವಾಸ್, ಹಣಮಂತ ನಿರಾಣಿ, ಧನಂಜಯ್ ಸರ್ಜಿ ಸೇರಿದಂತೆ ಸಂಘದ ಅಧ್ಯಕ್ಷರು, ಪಧಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಯ ಶಿಕ್ಷಕರುಗಳು ಉಪಸ್ಥಿತರಿದ್ದರು.

Author