ಸಾಗರ ತಾಲೂಕಿನ ಆನಂದಪುರ ಬಳಿ ನೀರಾವರಿ ಪಂಪ್ಸೆಟ್ನ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಎಮ್ಮೆಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತರು 112ಗೆ ಕರೆ ಮಾಡಿ, ವಿದ್ಯುತ್ ವೈಯರ್ ತುಂಡಾಗಿ ಬಿದ್ದು ಎಮ್ಮೆ ಮೃತಪಟ್ಟಿರುವ ಕುರಿತು ಮಾಹಿತಿ ನೀಡಿದ್ದರು.
ಮಾಹಿತಿ ತಲುಪಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಇಆರ್ವಿ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.







