ಬೆಳಗಾವಿ | ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪಂಜಿನ ಮೆರವಣಿಗೆ

ಬೆಳಗಾವಿ

ಬೆಳಗಾವಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ ಬೆಂಬಲಿಗರು ಪಂಜಿನ ಮೆರವಣಿಗೆ ನಡೆಸಿದರು.

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿ, ಲಕ್ಷ್ಮೀ ಹೆಬ್ಬಾಳಕ‌ರ್ ಪರ ಘೋಷಣೆಗಳನ್ನು ಕೂಗಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯು ಕೆಲಕಾಲ ಗಮನ ಸೆಳೆಯಿತು.ಬಳಿಕ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Author