ಬೆಂಗಳೂರು, ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು ಬಿ. ದಯಾನಂದ್ ಅವರ ವರ್ಗಾವಣೆಗೆ ಸರ್ಕಾರ ಆದೇಶಿಸಿದೆ. ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ.
ಬಿ. ದಯಾನಂದ್ ಅವರನ್ನು ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆಯೂ ಆಗಿದೆ. ಜ್ಯೋತಿ ಕೆ. ಅವರನ್ನು ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಡಾ. ವಿಶಾಲ್ ಆರ್. ಮತ್ತು ಡಾ. ಮಂಜುಳಾ ಎನ್. ಅವರ ವರ್ಗಾವಣೆಗಳು ಕೂಡಾ ಜರುಗಿದೆ.
ಜವಳಿ ಅಭಿವೃದ್ಧಿ ಆಯುಕ್ತರಾಗಿದ್ದ ಜ್ಯೋತಿ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೂತನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹಿಂದೆ ಆಯೋಗದ ಕಾರ್ಯದರ್ಶಿಯಾಗಿದ್ದ (ಪ್ರಭಾರ) ಡಾ. ವಿಶಾಲ್ ಆರ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ.
7 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ ಉನ್ನತ ಅಧಿಕಾರಿ ವಸಂತ್ ಕುಮಾರ್ ಪಿ.ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಶಿ ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ.



