ಆಗುಂಬೆ ಹೆಡ್ ಕಾನ್ಸ್‌ಟೇಬಲ್ ಶಿವಣ್ಣ ಹೃದಯಾಘಾತದಿಂದ ನಿಧನ

ಶಿವಮೊಗ್ಗ

ತೀರ್ಥಹಳ್ಳಿ, ತಾಲ್ಲೂಕಿನ ಆಗುಂಬೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಶಿವಣ್ಣ (೫೨) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆಗುಂಬೆಯಲ್ಲಿ ಹೃದಯಾಘಾತ ಸಂಭಿಸಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅವರಿಗೆ ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು ಇದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದೆ.

Author