ಶಿವಮೊಗ್ಗ,ಕರ್ನಾಟಕ ಮಾಜಿ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರು ನಿನ್ನೆ ದಿನ ನಿಧನ ಆಗಿರುವುದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಡೆಯುತ್ತಿರುವ ಅನಿರ್ಧಷ್ಟವಾದಿ ಧರಣಿಯಲ್ಲಿ ಇಂದು ಬೆಳಗ್ಗೆ ಜಿಲ್ಲಾ ಅಧ್ಯಕ್ಷರಾದ ಎನ್ ಕೆ ಜಗದೀಶ್ ರವರ ನೇತೃತ್ವದಲ್ಲಿ ಬಿ ಸಿ ನಾಗೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಶ್ರದ್ದಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಮಾಲತೇಶ್,ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ,ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು ಪ್ರಮುಖರಾದ ಎಸ್ ಎಸ್ ಜ್ಯೋತಿ ಪ್ರಕಾಶ್, ಮಾಧ್ಯಮದ ಚಂದ್ರಶೇಖರ್ ಎಸ್, ಮಂಜುನಾಥ್ ಎನ್, ಸೋಷಿಯಲ್ ಮೀಡಿಯಾದ ಶರತ್ ಕಲ್ಯಾಣಿ, ದಿನೇಶ್ ಆಚಾರ್ಯ ಹಾಗೂ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.





