ಹಸಿರು ತೋರಣ, ಬಾವುಟ ಹಾಗೂ ವಿದ್ಯುತ್ ದೀಪಗಳಿಂದ ಕಂಗೊಳಿಸಿದ ಶಿವಮೊಗ್ಗ : ನಗರದಲ್ಲಿ ಈದ್ ಮಿಲಾದ್ ಸಡಗರದ ವಾತಾವರಣ

ಶಿವಮೊಗ್ಗ

ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಸಡಗರದ ವಾತಾವರಣ ನಿರ್ಮಾಣವಾಗಿದೆ.ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಹಸಿರು ತೋರಣಗಳು, ಹಸಿರು ಬಾವುಟಗಳು ಮತ್ತು ವಿವಿಧ ಬಣ್ಣಗಳ ವಿದ್ಯುತ್ ದೀಪಗಳಿಂದ ಅದ್ದೂರಿ ಅಲಂಕಾರ ಮಾಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಟಿಪ್ಪು ಸುಲ್ತಾನ್ ಅವರ ಪ್ರತಿಮೆಗಳ ಸುತ್ತಲೂ ವಿಶೇಷ ಶೃಂಗಾರ ಮಾಡಲಾಗಿದ್ದು, ರಾತ್ರಿ ವೇಳೆಯಲ್ಲಿ ವಿದ್ಯುತ್ ದೀಪಗಳ ಬೆಳಕಿನಿಂದ ನಗರ ಜಗಮಗಿಸುತ್ತಿದೆ.

ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದು, ನಗರದ ವಿವಿಧೆಡೆ ಹಬ್ಬದ ಸಂಭ್ರಮ ಮನೆಮಾಡಿದೆ.

ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಹಸಿರು ಅಲಂಕಾರ ಕಣ್ಮನ ಸೆಳೆಯುತ್ತಿದ್ದು, ಶಿವಮೊಗ್ಗ ನಗರವೇ ಹಬ್ಬದ ಸಂಭ್ರಮದಲ್ಲಿ ಕಂಗೊಳಿಸುತ್ತಿದೆ.ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕ ಕ್ರಮವಾಗಿ ಪೊಲೀಸ್ ಬಂದೋಬಸ್ತ್‌ ಕೂಡ ಕೈಗೊಳ್ಳಲಾಗಿದೆ.

Author