ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ನಮ್ಮ ಮೊದಲ ಆದ್ಯತೆ : ಸಂಸದ ಬಿ. ವೈ. ರಾಘವೇಂದ್ರ

ಶಿವಮೊಗ್ಗ

ಇಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ವಿಭಾಗ ಮಟ್ಟದ (ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು) ಪಕ್ಷದ ಪ್ರಮುಖರ ವಿಶೇಷ ಸಭೆಯಲ್ಲಿ ಸಂಸದ ರಾಘವೇಂದ್ರ ಅವರು ಭಾಗವಹಿಸಿದರು.​

ಸಭೆಯಲ್ಲಿ ಕಸ್ತೂರಿರಂಗನ್ ವರದಿ ಕರಡು ಜಾರಿ ಹಾಗೂ ಅದರಿಂದ ಮಲೆನಾಡು ಭಾಗದ ಜನರ ಮೇಲಾಗುವ ಪರಿಣಾಮಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.​

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಪರಿಸರ ರಕ್ಷಣೆ ಮತ್ತು ಜನರ ಕಲ್ಯಾಣ — ಎರಡಕ್ಕೂ ಸಮತೋಲನದ ಶಾಶ್ವತ ಪರಿಹಾರ ಕಂಡುಕೊಳ್ಳಲು ಪಕ್ಷ ಬದ್ಧವಾಗಿದೆ.​

ಈ ಸಭೆಯಲ್ಲಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಆರಗ ಜ್ಞಾನೇಂದ್ರ, ಶ್ರೀ ಸಿ.ಟಿ., ಶ್ರೀ ಆರ್.ಕೆ. ಸಿದ್ಧರಾಮಣ್ಣ, ಶ್ರೀ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author