ಶಿವಮೊಗ್ಗ | ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ಶಿವಮೊಗ್ಗ

ಶಿವಮೊಗ್ಗ, 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪೋಷಕರ ವಿರುದ್ಧವೇ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾಳೆ. ಪೋಷಕರು ಇಬ್ಬರು ಮಕ್ಕಳನ್ನು ಮಾತ್ರ ದೇವಸ್ಥಾನಕ್ಕೆ ಹೋದವೇಳೆ ನೇಣಿಗೆ ಶರಣಾಗಿದ್ದಾಳೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಕುಟುಂಬದಲ್ಲಿ ಮೂವರು ಮಕ್ಕಳಿದ್ದು, ಸೃಷ್ಟಿಯ ಪೋಷಕರು ಇಬ್ಬರು ಮಕ್ಕಳನ್ನು ಕರೆದುಕೊಂಡು ರಾಯರ ಆರಾಧನೆ ಹಿನ್ನಲೆಯಲ್ಲಿ ರಾಘವೇಂದ್ರ ಸ್ವಾಮಿ ಮಠಕ್ಕೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ಸೃಷ್ಟಿಯನ್ನು ಮಾತ್ರ ಮನೆಯಲ್ಲಿ ಬಿಟ್ಟು ಹೋಗಲಾಗಿತ್ತು ಎನ್ನಲಾಗಿದೆ.ತನ್ನನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರಿಂದ ಪೋಷಕರು ಮನೆಗೆ ವಾಪಾಸ್ ಬರುವದರೊಳಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾತುಗಳು ಕೇಳಿಬಂದಿವೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಕುರಿತು ಕುಟುಂಬದವರು ನೀಡಿರುವ ದೂರು ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿಹೊರಬರಬೇಕಿದೆ.ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ. ಸೃಷ್ಟಿ ನಗರದ ರಾಮಕೃಷ್ಣ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ನಿನ್ನೆ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಪೋಷಕರು ಓದು ಎಂದು ಬಲವಂತ ಮಾಡಿದ್ದೇbಕಾರಣವಾಗಿರಬಹುದು ಎಂಬ ಮಾಹಿತಿ ಕೇಳಿಬಂದಿದೆ.ತುಂಗನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Author