ಶಿವಮೊಗ್ಗ | ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಕಿಡಿಗೇಡಿಗಳಿಂದ ಬೆಂಕಿ

ಕ್ರೈಂ

ಶಿವಮೊಗ್ಗದ ವೆಂಕಟೇಶ್ವರ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ತಡರಾತ್ರಿ ಪಲ್ಸರ್ ಎನ್‌ಎಸ್ ಮಾದರಿಯ ಬೂದು ಹಾಗೂ ಬಿಳಿ ಬಣ್ಣದ ಎರಡು ಬೈಕ್‌ಗಳನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು.

ಆ ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮವಾಗಿ ಬೈಕ್‌ಗಳ ಸೀಟ್, ಪೆಟ್ರೋಲ್ ಟ್ಯಾಂಕ್ ಹಾಗೂ ಮೀಟರ್ ಬೋರ್ಡ್ ಸೇರಿದಂತೆ ಅನೇಕ ಭಾಗಗಳು ಸುಟ್ಟು ಹೋಗಿವೆ.

ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author