ಶಿವಮೊಗ್ಗ | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ. 4ರಂದು ಶ್ರೀ ಕೃಷ್ಣ ಜಯಂತಿ

ಶಿವಮೊಗ್ಗ

ಶಿವಮೊಗ್ಗ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ. 04 ರಂದು ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಉದ್ಘಾಟನೆಯನ್ನು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು.

ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸುವರು.

ಭದ್ರಾವತಿಯ ಸರ್.ಎಂ.ವಿ.ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಪಾರ್ವತಮ್ಮ ಎಂ. ಇವರು ವಿಶೇಷ ಉಪನ್ಯಾಸವನ್ನು ನೀಡುವರು.

Author