ಬಿಜೆಪಿ ಪಕ್ಷದ ‘ಬಳ್ಳಾರಿ ಚಲೋ’ ಜನಾಂದೋಲನ ಪಾದಯಾತ್ರೆ 5ನೇ ದಿನದ ಸಂದರ್ಭದಲ್ಲಿ ಕರಟಗಿಯಲ್ಲಿ ‘ರಾಷ್ಟ್ರೀಯ ಶಿಕ್ಷಕರ ದಿನಾಚರಣೆ’ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ

ಕರ್ನಾಟಕ

ಇಂದು ಶಿಕ್ಷಕರ ದಿನ! ಬಿಜೆಪಿ ಪಕ್ಷದ ‘ಬಳ್ಳಾರಿ ಚಲೋ’ ಜನಾಂದೋಲನ ಪಾದಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕರಟಗಿಯಲ್ಲಿ ‘ರಾಷ್ಟ್ರೀಯ ಶಿಕ್ಷಕರ ದಿನಾಚರಣೆ’ ಪ್ರಯುಕ್ತ ಹಲವಾರು ಶಿಕ್ಷಕರನ್ನು ಭೇಟಿಯಾಗಿ, ಅವರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ, ಅವರಿಗೆ ಗೌರವ ಸಲ್ಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸನ್ಮಾನಿಸಿದರು.

ಸಮಾಜಕ್ಕೆ ಅಕ್ಷರ ದಾಸೋಹ ನೀಡಿ, ಮೌಲ್ಯಯುತ ಶಿಕ್ಷಣದ ಮೂಲಕ ನಾಡಿನ ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಸೇವೆ ಅನನ್ಯವಾದದ್ದು. ನಾಡಿನ ಎಲ್ಲ ಶಿಕ್ಷಕ ವೃಂದಕ್ಕೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಇಂದು ಪಾದಯಾತ್ರೆಯಲ್ಲಿ ಜೊತೆಗೂಡಿರುವ ಮಾಜಿ ಸಚಿವರಾದ ಶ್ರೀರಾಮುಲು, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಮಾಜಿ ಶಾಸಕ ಬಸವರಾಜ ದಡೇಸುಗೂರು, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮುಖಂಡರಾದ ಕೆ.ಕರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Author