ಲೋಕೋಪಯೋಗಿ ಸಚಿವರಿಗೆ ED ಶಾಕ್‌ ; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ

ಬೆಂಗಳೂರು

ಬೆಂಗಳೂರು,ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ED ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ.ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಕೇಳಿ ಬಂದಿದೆ.

ಇಂದು ಬೆಳಿಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡವು ಸಚಿವರ ಮನೆಯೊಳಗೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹವಾಲಾ ಹಣಕಾಸು ವ್ಯವಹಾರದ ಲಿಂಕ್ ಆಧಾರದ ಮೇಲೆ ಈ ಶೋಧ ನಡೆಸಲಾಗುತ್ತಿದೆ.

ಮನೆಯಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ತೀವ್ರ ತನಿಖೆಗೆ ಒಳಪಡಿಸಲಾಗುತ್ತಿದ್ದು, ಪ್ರಮುಖ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Author