ಶಿವಮೊಗ್ಗ, ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇವರು ಸೆ. 12 ರಂದು ಬೆಳಗ್ಗೆ 10ಕ್ಕೆ ಹಾರನಹಳ್ಳಿ ಅಂಬೇಡ್ಕರ್ ಭವನದಲ್ಲಿ ಹಾರನಹಳ್ಳಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.





