ಭದ್ರಾವತಿ | ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಮಹಿಳೆಯ ರಕ್ಷಣೆ ಮಾಡಿದ 112 ಸಿಬ್ಬಂದಿಗಳು

ಕ್ರೈಂ

ಭದ್ರಾವತಿ: 112 ಸಿಬ್ಬಂದಿಗಳ ಕಾರ್ಯಕ್ಷಮತೆಯಿಂದಾಗಿ ಭದ್ರಾವತಿಯಲ್ಲಿ ನಡೆಯಬೇಕಿದ್ದ ಅನಾಹುತವೊಂದು ತಪ್ಪಿದೆ. ರೈಲು ಹಳಿಯ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರನ್ನು ರಕ್ಷಿಸಿ, ಆಕೆಗೆ ಹಾಗೂ ಕುಟುಂಬಕ್ಕೆ ಸೂಕ್ತ ಸಾಂತ್ವನ ನೀಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ದಿನಾಂಕ 07.09.2026 ರಂದು ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ರೈಲು ಹಳಿಯ ಸಮೀಪ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ಕುರಿತು ಸಾರ್ವಜನಿಕರೊಬ್ಬರು 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿದ್ದಾರೆ.ಪೋಲಿಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಸ್ಥಳೀಯ ಸಾರ್ವಜನಿಕರು ಆ ಮಹಿಳೆಯನ್ನು ಸಮಾಧಾನಪಡಿಸಿ, ಸುರಕ್ಷಿತವಾಗಿ ಕರೆತಂದು ಕೂರಿಸಿದ್ದರು.ನಂತರ ಸಿಬ್ಬಂದಿಗಳು ಆಕೆಯನ್ನು ಆಕೆಯ ಮನೆಗೆ ತಲುಪಿಸಿದ್ದಾರೆ. ಬಳಿಕ ಆಕೆಯ ಪತಿಗೆ ಸೂಕ್ತ ತಿಳುವಳಿಕೆ ನೀಡಿದ್ದಾರೆ.

Author