ಶಿವಮೊಗ್ಗ ನಗರ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋಶಂಕರ ಲೇಔಟ್ ನಲ್ಲಿ ಒಬ್ಬ ವ್ಯಕ್ತಿ ಮಾರುತಿ ಸ್ವಿಫ್ಟ್ ಸಿಲ್ವರ್ ಕಲರ್ ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಇಲಾಖೆಯ ಮೇಲಾಧಿಕಾರಿಗಳ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನಾರಾಯಣ ಮಧುಗಿರಿ ಮತ್ತು ಸಿಬ್ಬಂದಿಗಳು ಹಾಗೂ ಅಧಿಕಾರಿಗಳೊಂದಿಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಆರೋಪಿತನಾದ ಮೊಹಮ್ಮದ್ ಅಲ್ತಾಪ್ ಬಿನ್ ಅಬ್ದುಲ್ ಸಮದ್ ಸಾಬ್ ವಾಸ-ಇಬ್ರಾಹಿಂ ಮಸೀದಿ ಹತ್ತಿರ ಅಣಲೆಕೊಪ್ಪ ಶಿರುವಾಳ ರಸ್ತೆ ಸಾಗರ ಟೌನ್ ಹಿಡಿದು ಆತನು ಬಳಿ ಕೆಎ-15 ಪಿ-3992 ಸ್ವಿಫ್ಟ್ ಸಿಲ್ವರ್ ಕಲರ್ ನಲ್ಲಿದ್ದ 04 ಕೆ.ಜಿ. 130 ಗ್ರಾಂ ತೂಕ ಇರುವ ಸುಮಾರು 2,00,000/-ರೂ ಬೆಳೆಬಾಳುವ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಸದರಿ ಆರೋಪಿತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.
ಮುಂದುವರೆದು ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಸಂಬಂಧ ಕಳೆದ 15 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.



