ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹಿರಿಯ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ (IPS, KN 2003) ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ಸೆಪ್ಟೆಂಬರ್ 11, 2026ರ ಅಧಿಸೂಚನೆಯ ಪ್ರಕಾರ, ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿ-1ರಲ್ಲಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (IGP) ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ಸತೀಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.ಅವರನ್ನು ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ (Inspector General of Police, Eastern Range, Davanagere) ಖಾಲಿ ಇರುವ ಹುದ್ದೆಗೆ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಕ್ರಮಕ್ಕಾಗಿ ಕರ್ನಾಟಕ ಗೆಜೆಟ್‌ನಲ್ಲಿ ಪ್ರಕಟಿಸಲು ಸೂಚಿಸಲಾಗಿದೆ.





