ಶಿವಮೊಗ್ಗ ಮಾರಕಾಸ್ತ್ರ, ಗಾಂಜಾ ಹಾಗೂ ವಾರೆಂಟ್ಗಳ ಪರಿಶೀಲನೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.
ಇದರ ಭಾಗವಾಗಿ ಇಂದು, ಸೆಪ್ಟೆಂಬರ್ 13ರ ಬೆಳಗಿನ ಜಾವ ಶಿವಮೊಗ್ಗ ಜಿಲ್ಲಾ ಪೊಲೀಸರು ರೌಡಿ ಆಸಾಮಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು.. ದಾಳಿ ವೇಳೆ ರೌಡಿ ಆಸಾಮಿಗಳ ಹಾಜರಾತಿ, ಅವರ ಚಟುವಟಿಕೆಗಳು, ಮಾರಕಾಸ್ತ್ರಗಳು ಹಾಗೂ ಮಾದಕ ವಸ್ತು ಗಾಂಜಾ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಪೊಲೀಸರು ಪರಿಶೀಲಿಸಿದರು.

ಅಲ್ಲದೆ, ನ್ಯಾಯಾಲಯದಿಂದ ಹೊರಡಿಸಲಾಗಿರುವ ವಾರೆಂಟ್ಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ. ರೌಡಿ ಆಸಾಮಿಗಳು ಇನ್ನು ಮುಂದೆ ಉತ್ತಮ ನಡೆ-ನುಡಿಯ ಹೊಂದಿರಬೇಕು. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸರು ಇಂತಹ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿದ್ದಾರೆ. ಇದುಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮಹತ್ವದ ಸುರಕ್ಷತ ಕ್ರಮವಾಗಿದೆ.





