ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.
ಶಿವಶಂಕರಪ್ಪನವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್‌ರ ಅಧ್ಯಕ್ಷರಾಗಿದ್ದರು.
ಶಿಕ್ಷಣವಾದಿ ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಸಕ್ಕರೆ ಮತ್ತು ಡಿಸ್ಟಿಲರೀಸ್‌ನ ವ್ಯಾಪಾರ ಮಾಡುವ ಶ್ಯಾಮನೂರ್ ಗ್ರೂಪ್ ಎಂದು ಕರೆಯಲ್ಪಡುವ ಒಂದು ಉದ್ಯಮದ ಗುಂಪನ್ನೇ ಹೊಂದಿದ್ದರು.
ಶಿವಶಂಕರಪ್ಪನವರು ದಕ್ಷಿಣ ದಾವಣಗೆರೆ ಜಿಲ್ಲೆಯ 2೦೦8 ಹಾಗು 2೦೧3ರ ವಿಧಾನ ಸಭಾ ಚುನಾವಣೆಯಲ್ಲಿ ಜಯವನ್ನು ಸಾಧಿಸಿ ಕಾಂಗ್ರೆಸ್ ಪಕ್ಷದ ಅತ್ಯಂತ ಅನುಭವಿ ಪ್ರತಿನಿಧಿಯಾಗಿಯೂ ಹಾಗೂ ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2೦೦6ರ ಚುನಾವಣೆಗಳಲ್ಲಿ ಶಿವಶಂಕರಪ್ಪನವರು ಬಿಜೆಪಿ ಪಕ್ಷದ ಯಶವಂತ ರಾವ್ ಜಾಧವ್ ಅವರನ್ನು ಸುಮಾರು 55೦೦ ಮತಗಳಿಂದ ಸೋಲಿಸಿ ದಾವಣಗೆರೆ ಜಿಲ್ಲೆಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರು.
ಪ್ರಭಾವಶಾಲಿಯಾದ ರಾಜಕಾರಣಿ 2೦೦8ರಿಂದ ತಮ್ಮನ್ನುತಾವೆ ತೊಡಗಿಸಿಕೊಂಡು ರಾಜ್ಯದ ಅಭಿವೃದ್ಧಿಗಾಗಿ ತಮ್ಮಸಮಯ ಹಾಗೂ ಸಂಪನ್ಮೂಲವನ್ನು ಕೇಂದ್ರೀಕರಿಸಿದ್ದು. 2೦೧13ರ ಚುನಾವಣೆಯಲ್ಲಿಯೂ ಸಹ ಶಿವಶಂಕರಪ್ಪನವರು ಮೇಲ್ಕಂಡ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವಿನ ಪತಾಕೆ ಹಾರಿಸಿದ್ದರು. ಒಟ್ಟು ಎಂಟು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು 6 ಬಾರಿ ಶಾಸಕರಾಗಿ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಹಿರಿಯ ನಾಯಕನ ಅಗಲಿಕೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.



