ಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್

ಶಿವಮೊಗ್ಗ

ಶಿವಮೊಗ್ಗ, ಕಾಂಗ್ರೆಸ್ ಮುಖಂಡ ಎಚ್ ಪಿ ಗಿರೀಶ್ ಅವರಿಂದ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ತಿಳಿಸುವ ಮೂಲಕ ಮಾಹಿತಿ ಹಂಚಿಕೊಂಡಿದ್ದು ಹೀಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪ ನವರ ನಿಧನವು ರಾಜ್ಯಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಹಾಗೂ ವೀರಶೈವ -ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪನವರು ತಮ್ಮ ನೇರ ನುಡಿ, ದೃಢ ನಿರ್ಧಾರ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು.

ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿದ ಸೇವೆ ಅಪಾರ ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಖ್ಯಾತಿಯಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗೆ ಅಪೂರ್ವ ಕೊಡುಗೆ ನೀಡಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ.

ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್‍.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.

Author