ಶಿವಮೊಗ್ಗ, ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ವೀರಶೈವ ಲಿಂಗಾಯತ ಸಮಾಜದ ನಾಯಕರಾದ ದಾವಣಗೆರೆಯ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನ ಹಿನ್ನಲೆಯಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಭಾವನದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಆ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಮಾತನಾಡಿ ಅವರ ಒಡನಾಟ ಹಾಗೂ ಅವರ ವಿಚಾರ ದೃಷ್ಟಿಕೋನಗಳ ಕುರಿತು ಮಾಹಿತಿ ಹಂಚಿಕೊಂಡರು.
ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮಾತನಾಡಿ ಶಾಮನೂರು ಶಿವಶಂಕರಪ್ಪ ಅವರ ಸೇವಾ ಮನೋಭಾವ ಹಾಗೂ ಮನೆಗೆ ಯಾರೇ ಬಂದರು ಸಹ ಉಪಚಾರ ಮಾಡಿಯೇ ಕಳಿಸುತ್ತಿದ್ದನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್, ಶಿವಕುಮಾರ್, ಕಲೀಮುಲ್ಲಾ, ಹಾಗೂ ಮಹಿಳಾ ಮುಖಂಡರು ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯೆ ಅರ್ಚನಾ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಹಾಗೂ ಇನ್ನಿತರು ಉಪಸ್ಥಿತರಿದ್ದರು.



