ಶಿವಮೊಗ್ಗ,ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದಎನ್‌ಒಸಿ ನೀಡಲು 1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದಿಂದ ಎನ್‌ಒಸಿ ಪಡೆಯಬೇಕಿತ್ತು. ಈ ಎನ್‌ಒಸಿ ನೀಡಲು ಅಧಿಕಾರಿ ಅಶೋಕ್ ಕುಮಾರ್ ಅವರು ದೂರುದಾರ ಅನೂಪ್ ಅವರ ಬಳಿ 71 ಲಕ್ಷ ಲಂಚಕ್ಕೆ ಬೇಡಿಕೆಇಟ್ಟಿದ್ದರು ಎನ್ನಲಾಗಿದೆ.ಲಂಚ ನೀಡಲು ಇಚ್ಛಿಸದ ಅನೂಪ್ ಅವರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ಯೋಜನೆ ರೂಪಿಸಿದ್ದರು., ಇಂದು ದೂರುದಾರರಿಂದ ಅಶೋಕ್ ಅವರು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಯನ್ನು ಹಣದ ಸಮೇತ ವಶಕ್ಕೆ ಪಡೆಯಲಾಯಿತು.
ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.





