ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗದ ವಿದ್ಯಾರ್ಥಿ ಆತ್ಮಹತ್ಯೆ

ಅವಘಡ ದುರಂತ

ಮಣಿಪಾಲ ಇಲ್ಲಿನ ಎಂಐಟಿ ಕಾಲೇಜಿನಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ಸೆಪ್ಟೆಂಬರ್ 22ರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗದ ವಿನೋಬನಗರ ನಿವಾಸಿ ಸಮರ್ಥ್ ಆರ್. ಪಾಟೀಲ್ (22) ಎಂದು ಗುರುತಿಸಲಾಗಿದೆ. ಅವರು ಇಲ್ಲಿಯೇ ಒಂದು ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದು, ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವೈಯಕ್ತಿಕ ಕಾರಣದಿಂದ ಮನನೊಂದಿದ್ದರೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author