ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದಲ್ಲಿ ಅಡಿಕೆ ಸಾಗಿಸುತ್ತಿದ್ದ ಲಾರಿಯೊಂದು ಬಸವಣ್ಣ ದೇವಾಲಯದ ಮಹಾದ್ವಾರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ದೇವಾಲಯದ ಮಹಾದ್ವಾರ ನೆಲಕ್ಕುರುಳಿದೆ.
ಕೋಣಂದೂರಿನ ಬಸವಣ್ಣ ಬೀದಿಯಲ್ಲಿರುವ ಬಸವಣ್ಣ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ. ಅಡಿಕೆ ಸಾಗಿಸುತ್ತಿದ್ದ ಲಾರಿ ದೇವಾಲಯದ ಮಹಾದ್ವಾರಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಾರ ಸಂಪೂರ್ಣವಾಗಿ ಕುಸಿದು ಬಿದ್ದಿದೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲವೆಂದು ತಿಳಿದುಬಂದಿದೆ.


