ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಗೆ ಕರವೇ ಸ್ವಾಭಿಮಾನಿ ಬಣದಿಂದ ಅಭಿನಂದನೆ ಶಿವಮೊಗ್ಗ ನಗರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಮ ಕೈಗೊಂಡ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಅಭಿನಂದಿಸಲಾಯಿತು.
ನಗರದಲ್ಲಿ ಈದ್ ಮಿಲಾದ್ ಹಬ್ಬ, ಶಾಂತಿನಗರ–ರಾಗಿಗುಡ್ಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡೆದ ಸಾಲುಸಾಲು ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಗಳು, ಹಿಂದೂ ಮಹಾಸಭಾ ಗಣೇಶೋತ್ಸವದ ಮೆರವಣಿಗೆ ಹಾಗೂ ವಿಸರ್ಜನೆ ಮತ್ತು ಓಂ ಗಣಪತಿ ವಿಸರ್ಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ನಿಯೋಜಿಸಲಾಗಿತ್ತು.ಮುನ್ನೆಚ್ಚರಿಕಾ ಕ್ರಮವಾಗಿ ಶಾಂತಿ ಸಭೆಗಳನ್ನು ನಡೆಸಿ, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸೌಹಾರ್ದಯುತವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಸಹಕರಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರ ಕಾರ್ಯವೈಖರಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಶ್ಲಾಘಿಸಿದರು.ಸಾರ್ವಜನಿಕರ ನೆಮ್ಮದಿ ಹಾಗೂ ನಗರದ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳನ್ನು ಮೆಚ್ಚಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರನ್ನು ಕರವೇ ಸ್ವಾಭಿಮಾನಿ ಬಣದ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್.ಎಸ್., ಜಿಲ್ಲಾ ಉಪಾಧ್ಯಕ್ಷ ಗಂಗಾಧರ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮದ್ ಶಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಕೆ.ಬಿ., ಜಿಲ್ಲಾ ಕಾರ್ಯದರ್ಶಿ ಕರವೇ ಸಾಧಿಕ್, ಗ್ರಾಮಾಂತರ ನಗರಾಧ್ಯಕ್ಷ ಪ್ರವೀಣ್ ಕುಮಾರ್, ಗ್ರಾಮಾಂತರ ಉಪಾಧ್ಯಕ್ಷ ಕೇಶವ ವಿ., ಜಿಲ್ಲಾ ಮುಖಂಡರಾದ ಗೀರೀಶ್, ಮಂಜುನಾಥ್ ಟಿ.ಎಂ. ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


