ಶಿಕಾರಿಪುರ | ಭಾರತ್ ಜೋಡೋ 2 ಪಾದಯಾತ್ರೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ರಾಜಕೀಯ

ಈಸೂರು(ಶಿಕಾರಿಪುರ) ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಇತಿಹಾಸ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ, ಬಿಜೆಪಿ ಅವರದ್ದೇನಿದ್ದರೂ ಅದಾನಿ,‌‌ಲಲಿತ್ ಮೋದಿ ಸಾಲ ಮನ್ನಾ ಮಾಡಿದ ಇತಿಹಾಸ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಪಕ್ಷವು ಬುಧವಾರ ಶಿಕಾರಿಪುರದಲ್ಲಿ ಹಮ್ಮಿಕೊಂಡಿದ್ದ. ಭಾರತ್ ಜೋಡೋ ೨ ಪಾದಯಾತ್ರೆಯ ಚಾಲನೆಗೂ ಮುನ್ನ ಈಸೂರು ಗ್ರಾಮದಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬರದ ಹಿನ್ನೆಲೆಯಲ್ಲಿ ರೈತರ ಬೆಳೆ ಸಾಲ ಮಾಡಬೇಕೆನ್ನುವ ಬೇಡಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬರದ ಹಿನ್ನೆಲೆಯಲ್ಲಿ ರೈತರ‌ ನೆರವಿಗೆ ಬರಬೇಕೆಂದು ನಾವು ಕೇಂದ್ರದಿಂದ ೧೮ ಸಾವಿರ‌ ಕೋಟಿ ನೆರವು ಕೇಳಿದ್ದೇವೆ.‌ಆದರೆ ಈ‌ ಬಗ್ಗೆ ಏನೊಂದು ಪ್ರತಿಕ್ರಿಯಿಸದ ಕೇಂದ್ರ ಸರ್ಕಾರ, ರಾಜ್ಯದ ವಿರುದ್ಧ ‌ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.ರಾಜ್ಯದ ರೈತರು ಮತ್ತು ಕಾರ್ಮಿಕರು ಪಾವತಿಸುವ ತೆರಿಗೆಗಳಿಂದ ಕೇಂದ್ರದ ಖಜಾನೆ ತುಂಬುತ್ತದೆ. ಹೀಗಾಗಿ ರಾಜ್ಯಕ್ಕೆ ಬರಬೇಕಾದ ಹಣವನ್ನು ವಾಪಸ್ ಪಡೆಯಬೇಕು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಸಮೀಕ್ಷಾ ತಂಡವನ್ನು ಕಳುಹಿಸುವಲ್ಲಿ ವಿಳಂಬ ಮಾಡಿದೆ ಎಂದು ಆರೋಪಿಸಿದ ಅವರು, ರಾಜ್ಯದ ಜನರ ಪರವಾಗಿ ಕೇಂದ್ರದ ಮೇಲೆ ಒತ್ತಡ ತರಲು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವೇ ಬರ ಪರಿಹಾರ ನೀಡಬೇಕು ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಕೇಂದ್ರ ಸರ್ಕಾರವೂ ರಾಜ್ಯದ ಜನರಿಂದಲೇ ಸಂಗ್ರಹವಾಗುವ ತೆರಿಗೆ ಹಣವನ್ನು ಹೊಂದಿರುವುದರಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ನೀಡಬೇಕು ಎಂದು ವಾದಿಸಿದರು.

ಕುಮಾರಸ್ವಾಮಿ ಆರೋಪಗಳಿಗೂ ಪ್ರತಿಕ್ರಿಯೆನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಪ್ರಶ್ನಿಸಿದಾಗ, ಅವರು ಪ್ರಸ್ತಾಪಿಸುತ್ತಿರುವ ವಿಚಾರಗಳು ಹಿಂದಿನ ವರ್ಷಗಳಿಗೆ ಸಂಬಂಧಿಸಿದವು ಎಂದು ಹರಿಪ್ರಸಾದ್ ಹೇಳಿದರು.ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ವಿಚಾರಗಳ ಬಗ್ಗೆ ಏಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಪ್ರಶ್ನಿಸಿದ ಅವರು, ವೈಯಕ್ತಿಕ ರಾಜಕೀಯ ವೈರತ್ವಕ್ಕಾಗಿ ಈಗ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

Author