ಶಿವಮೊಗ್ಗ | ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ: ಗುಣಮಟ್ಟದಲ್ಲಿ ರಾಜಿ ಇಲ್ಲದೆ ಕಾಲಮಿತಿಯೊಳಗೆ ಮುಗಿಸಲು ತಾಕೀತು

ಶಿವಮೊಗ್ಗ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 14ರ ವಿದ್ಯಾನಗರ ಬಡಾವಣೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಬೆಳಿಗ್ಗೆ ಶಾಸಕರು ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಶಾಸಕರು, “ವಿದ್ಯಾನಗರ ಭಾಗದ ನಿವಾಸಿಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗುತ್ತಿದ್ದು, ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು.

ಇಂಜಿನಿಯರ್‌ಗಳು ಸ್ಥಳದಲ್ಲೇ ಹಾಜರಿದ್ದು ಕಾಮಗಾರಿಯ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಬೇಕು ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು,” ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಲಕ್ಷ್ಮಣ್, ಮೋಹನ್ ಸೇರಿದಂತೆ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಬಡಾವಣೆಯ ನಾಗರೀಕರು ಉಪಸ್ಥಿತರಿದ್ದರು.

Author