ಶಿವಮೊಗ್ಗ | ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯ ಸಂಪಾದಕರಾದ ಭಂಡಿಗಡಿ ನಂಜುಂಡಪ್ಪ ನಿಧನಕ್ಕೆ ಸಂಸದರ ಸಂತಾಪ

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯ ಸಂಪಾದಕರಾದ ಭಂಡಿಗಡಿ ನಂಜುಂಡಪ್ಪ (75) ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಸಂಸದರು ಸಂತಾಪ ಸೂಚಿಸಿದ್ದಾರೆ.

ಹಲವು ದಶಕಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದ ಶ್ರೀಯುತರು ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಜವಾಬ್ದಾರಿಗಳನ್ನು ನಿರ್ವಹಿಸಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಸರಳ ವ್ಯಕ್ತಿತ್ವ, ಧಾರ್ಮಿಕ ನಿಷ್ಠೆ ಹಾಗೂ ಸ್ನೇಹಪರ ಗುಣಗಳಿಂದ ಗುರುತಿಸಿಕೊಂಡಿದ್ದ ನಂಜುಂಡಪ್ಪ ಅವರು ಪತ್ರಕರ್ತರ ಸಂಘಟನೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ವೀರಶೈವ ಸಮಾಜದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ಪತ್ರಿಕಾ ಕ್ಷೇತ್ರ ಮತ್ತು ಸಹಕಾರ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮತ್ತು ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು /ಬಿ ವೈ ರಾಘವೇಂದ್ರ ಸಂಸದರು ಸಂತಾಪ ಸೂಚಿಸದರು.

Author