ಶಿವಮೊಗ್ಗ | ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ..!

ಶಿವಮೊಗ್ಗ

ಶಿವಮೊಗ್ಗ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕನ ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಕಛೇರಿ ಮುತ್ತಿಗೆ. ಸಂತ್ರಸ್ತ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕಾಂಗ್ರೇಸ್ ಪಕ್ಷದ ಮಣಿಪುರ ಕ್ಷೇತ್ರದ ಲೋಕಸಭಾ ಸದಸ್ಯ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಂಗೋಮ್ಹಾ ಬಿಮೋಲ್ ಅಕೋಯಿಜಮ್ ಇವನ ಅಲ್ಲಿನ ವಿದ್ಯಾರ್ಥಿನಿಯರ ಮೇಲೆ ನಡೆಸಿದ ಲೈಂಗಿಕ ಕಿರುಕುಳವನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಗೌರವ, ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿನಿಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಬೇಕು. ಇಂತಹ ಗಂಭೀರ ಆರೋಪಗಳಿದ್ದಲ್ಲಿ ಅವುಗಳನ್ನು ನಿರ್ಲಕ್ಷಿಸದೆ, ಕಾನೂನು ಮತ್ತು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ನಿಷ್ಪಕ್ಷಪಾತವಾಗಿ ಪರಿಶೀಲಿಸುವುದು ಅಗತ್ಯವಾಗಿದೆ.

ಆದ್ದರಿಂದ, ಬಿಜೆಪಿ ಶಿವಮೊಗ್ಗ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಈ ಕೆಳಕಂಡ ಬೇಡಿಕೆಗಳನ್ನು ತಮ್ಮ ಮುಂದಿಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಪಟ್ಟ ಪ್ರಾಧ್ಯಾಪಕರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು.ದೂರು ನೀಡಿರುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಿ, ಯಾವುದೇ ರೀತಿಯ ಬೆದರಿಕೆ, ಒತ್ತಡ ಅಥವಾ ಪ್ರತೀಕಾರಕ್ಕೆ ಒಳಗಾಗದಂತೆ ಕ್ರಮ ಕೈಗೊಳ್ಳಬೇಕು..ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಇರುವ ಕಠಿಣ ಸಂಬಂಧಿತ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.

ಕಾಯ್ದೆ ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕುವಂತೆ ಹಾಗೂ ಪ್ರಕರಣದ ವಿಚಾರಣೆ ಪಾರದರ್ಶಕವಾಗಿ ನಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಕಾಪಾಡಲು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ,ಜಾಗೃತಿ ಹಾಗೂ ದೂರು ಪರಿಹಾರ ವ್ಯವಸ್ಥೆಯನ್ನು ಬಲಪಡಿಸಬೇಕು.ಮಹಿಳೆಯರ ಮೇಲಿನ ಯಾವುದೇ ರೀತಿಯ ಕಿರುಕುಳವನ್ನು ನಾವು ಸಹಿಸುವುದಿಲ್ಲ. ಮಹಿಳೆಯರಿಗೆ ನ್ಯಾಯ ದೊರಕಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಆದ್ದರಿಂದ, ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಡಾ. ಅಂಗೋಮ್ಯಾ ಬಿಮೋಲ್ ಅಕೋಯಿಜಮ್ ಇವನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಿವಮೊಗ್ಗ ಜಿಲ್ಲಾ ಮಹಿಳಾ ಮೋರ್ಚಾ ಆಗ್ರಹಿಸುತ್ತದೆ ಎಂದಿದೆ.

Author