ಬೆಂಗಳೂರು, ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಪ್ರತಿವರ್ಷ ಅಕ್ಟೋಬರ್ 21ರಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರ ಆದೇಶ ಹೊರಡಿಸಿರುವುದನ್ನು ಕರ್ನಾಟಕ ಸರ್ಕಾರ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಪಿ.ಎಂ. ಮಾಲತೇಶ್ ಸ್ವಾಗತಿಸಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ಬ್ರಾಹ್ಮಣ ಸಮುದಾಯದಲ್ಲಿ ಸಂತಸ ಮೂಡಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಮಹತ್ವದ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬ್ರಾಹ್ಮಣ ಸಮುದಾಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಪಿ.ಎಂ. ಮಾಲತೇಶ್ ತಿಳಿಸಿದ್ದಾರೆ.
