ಶ್ರೀ ಮಧ್ವಾಚಾರ್ಯರ ಜಯಂತಿ ಆಚರಣೆ ; ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರ್ಕಾರದ ನಿರ್ದೇಶಕ ಪಿಎಂ ಮಾಲತೇಶ್ ರಿಂದ ಸಚಿವರಿಗೆ ಕೃತಜ್ಞತೆ ಸಲ್ಲಿಕೆ..!

ಬೆಂಗಳೂರು

ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶಿಸಿದ ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಿಗೆ ಇವರನ್ನು ಗಂಗಾವತಿಯಲ್ಲಿ ಭೇಟಿ ಮಾಡಿ ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶಿಸಿದ ಹಿನ್ನೆಲೆಯಲ್ಲಿ ಸಚಿವರಿಗೆ ಕೃತಜ್ಞತೆಯನ್ನ ಮಾಲತೇಶ್ ಅವರು ಸಲ್ಲಿಸಿದರು.

ಶ್ರೀ ರಾಮಾನುಜಾಚಾರ್ಯರ ಜಯಂತಿಯನ್ನು ಸಹ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಆದೇಶಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಎಂ ಎನ್ ಸುಂದರ್ ರಾಜ್ ಹಾಗೂ ಶಂಕರ ಚೈತನ್ಯ ವೇದಿಕೆಯ ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಬ್ರಾಹ್ಮಣ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಸಂತೋಷ ಕುಮಾರ್ ಉಪಸ್ಥಿತರಿದ್ದರು

Author