ಸೊರಬ ಕ್ಷೇತ್ರದ ಕಮನವಳ್ಳಿಯಲ್ಲಿ ಬಿಜೆಪಿಗೆ ಬಲ ತುಂಬಿದ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು!

ಶಿವಮೊಗ್ಗ

ಸೊರಬ,ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತು ಸೊರಬ ವಿಧಾನಸಭಾ ಕ್ಷೇತ್ರದ ಕಮನವಳ್ಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು ಎಂದು ಮಾನ್ಯ ಸಂಸದ ರಾಘವೇಂದ್ರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಬಿ.ಸಿ. ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್, ತಾಲೂಕು ಬಿಜೆಪಿ ಅಧ್ಯಕ್ಷರಾದ ಪ್ರಕಾಶ್, ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್, MADB ಮಾಜಿ ಅಧ್ಯಕ್ಷರಾದ ಪದ್ಮನಾಭ ಭಟ್, ನಿಗಮದ ಮಾಜಿ ಅಧ್ಯಕ್ಷರಾದ ಶ್ರೀ ರಾಜು ತಲ್ಲೂರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೀರೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದ ಅಭಿವೃದ್ಧಿಪರ ಆಡಳಿತಕ್ಕೆ ಜನರಿಂದ ದೊರೆಯುತ್ತಿರುವ ಬೆಂಬಲ ಹಾಗೂ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧದ ಜನಾಕ್ರೋಶವು ಬಿಜೆಪಿಯ ಸಂಘಟನಾ ಶಕ್ತಿಯನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

Author