ಆಗುಂಬೆ,ಉಡುಪಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಂದು ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಕೆಲಕಾಲ ಸಿಲುಕಿಕೊಂಡ ಘಟನೆ ರವಿವಾರ (ಅ.18) ನಡೆದಿದೆ.
ಬಸ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಳಿಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿ ಸ್ವಲ್ಪ ದೂರಕ್ಕೆ ಕೊಂಡೊಯ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ರವಿವಾರ ರಜಾ ದಿನವಾಗಿದ್ದರಿಂದ ಘಾಟಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿತ್ತು. ಬಸ್ ಸಿಲುಕಿಕೊಂಡಿದ್ದರಿಂದ ಕೆಲಕಾಲಸಂಚಾರ ವ್ಯತ್ಯಯ ಉಂಟಾಯಿತು. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿದ್ದರು.
