ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಕಲ್ಪನಾ ರಮೇಶ್ ನಿಧನಕ್ಕೆ ತೀವ್ರ ಸಂತಾಪ

ಶಿವಮೊಗ್ಗ

ಶಿವಮೊಗ್ಗ: ಬಿಜೆಪಿ ಮುಖಂಡರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ರಮೇಶ್ (ರಾಮು) ಅವರ ಧರ್ಮಪತ್ನಿ, ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಶ್ರೀಮತಿ ಕಲ್ಪನಾ ರಮೇಶ್ ಅವರು ನಿನ್ನೆ ಮಧ್ಯಾಹ್ನ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.

ಬಿಜೆಪಿ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಮೇಶ್ (ರಾಮು) ಅವರು ಜಿಲ್ಲೆಯ ವಿವಿಧ ಹಂತಗಳಲ್ಲಿ ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದು, ಪ್ರಸ್ತುತ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅವರ ಧರ್ಮಪತ್ನಿ ಕಲ್ಪನಾ ರಮೇಶ್ ಅವರ ಅಗಲಿಕೆ ಪಕ್ಷದ ವಲಯದಲ್ಲಿ ದುಃಖವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಹಾಗೂ ಸದ್ಗತಿಯನ್ನು ಕರುಣಿಸಲಿ. ಈ ದುಃಖದ ಸಂದರ್ಭದಲ್ಲಿ ಪತಿ ರಮೇಶ್ (ರಾಮು) ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು, ಬಂಧುಗಳು ಹಾಗೂ ಹಿತೈಷಿಗಳಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಾರ್ಥಿಸಿದೆ.

Author