ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಿಗದಿ ಪಡಿಸಿದ ಸಮಯವನ್ನು ಬಿಟ್ಟು ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿರುವುದರಿಂದ ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಅರಣ್ಯ, ಪರಿಸರ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಈ ಸಂಬಂಧ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿರುವ ಸಚಿವರು, ಬೆಳಕಿನ ಹಬ್ಬ ದೀಪಾವಳಿ-2026ನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ರಾಜ್ಯಾದ್ಯಾಂತ 8.11.2026 ರಿಂದ 10.11.2026 ರವರೆಗೆ ಆಚರಿಸಲಾಗುತ್ತಿದೆ. ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮವಾಗುವುದು ನಮ್ಮೆಲ್ಲರಿಗೂ ತಿಳಿದ ವಿಷಯ.
2026ರ ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಜರುಗಿಸಲು ಸೂಚಿಸಿದ್ದಾರೆ
