ಶಿವಮೊಗ್ಗದಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ “ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ” ಬೃಹತ್ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಪಕ್ಷದ ಹಿರಿಯ ನಾಯಕರು ಹಾಗೂ ಸಾರ್ವಜನಿಕರೊಂದಿಗೆ ಇಂದು ಸಂಸದ ರಾಘವೇಂದ್ರ ಅವರು ನಗರದ ರಾಮಣ್ಣ ಶ್ರೇಷ್ಟಿ ಪಾರ್ಕ್ ಯಿಂದ ಫ್ರೀಡಂ ಪಾರ್ಕ್ ವರೆಗು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ನಂತರ ಮಾತಾಡಿದ ಅವರು ದೇಶವಿರೋಧಿಗಳ ದೇಶ ಒಡೆಯುವ ಸಂಚನ್ನು ವಿಫಲಗೊಳಿಸಲು ಮತ್ತು ಸಂವಿಧಾನಬದ್ಧ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಈ ಜಾಗೃತಿ ಅಭಿಯಾನವನ್ನು ನಡೆಸಲಾಯಿತು ಎಂದು ತಿಳಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹಾಗೂ ರಾಜ್ಯದ ಜನವಿರೋಧಿ ನೀತಿಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ. ಈ ಅಭಿಯಾನದಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.
