ಶಿವಮೊಗ್ಗ, ದಕ್ಷಿಣ-ಕೇಂದ್ರೀಯ ರೈಲ್ವೇ ವಿಭಾಗ, ಸಿಕಂದರಾಬಾದ್ ಇವರು ಹೊರಗುತ್ತಿಗೆ ಆಧಾರದ ಮೇಲೆ 118 ಪಾಯಿಂಟ್ಸ್ ಮೆನ್ ಹುದ್ದೆಗಳಿಗೆ ಮಾಜಿ ಸೈನಿಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ 54 ವರ್ಷದೊಳಗಿನ ಅರ್ಹ ಮಾಜಿ ಸೈನಿಕರು ನ. 18 ರೊಳಗಾಗಿ ಅರ್ಜಿಗಳನ್ನು ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ನಿಗದಿತ ನಮೂನೆಯಲ್ಲಿ ಖುದ್ದಾಗಿ ಸಲ್ಲಿಸಲು ಕೋರಿದೆ.
ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ. ಸಿ.ಎ. ಹಿರೇಮಠ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
