ಶಿವಮೊಗ್ಗ | ನ. 14 : ನಿದಿಗೆ-1ನೇ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಮಲವಗೊಪ್ಪದ ಚನ್ನಬಸವೇಶ್ವರ ಸಭಾ ಭವನದಲ್ಲಿ

ಶಿವಮೊಗ್ಗ

ಶಿವಮೊಗ್ಗ, ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದ ಪೂರ್ಯ ನಾಯ್ಕ್ ನೇತೃತ್ವದಲ್ಲಿ ನಿದಿಗೆ-1 ನೇ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು

ನ. 14 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಿದಿಗೆ-1 ನೇ ಹೋಬಳಿಯ ಮಲವಗೊಪ್ಪದ ಚನ್ನಬಸವೇಶ್ವರ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಆದ್ದರಿಂದ ಸಾರ್ವಜನಿಕರು ಸದರಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಕೋರಿದ್ದಾರೆ.

Author