ತೀರ್ಥಹಳ್ಳಿ | ಬೈಕ್‌ಗಳ ಭೀಕರ ಅಪಘಾತ ; ಓರ್ವ ಸ್ಥಳದಲ್ಲೇ ಸಾವು

ಅವಘಡ ದುರಂತ

ತೀರ್ಥಹಳ್ಳಿ, ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಸಮೀಪದ ಬಾಳೆಬೈಲು ಬಳಿ ನಡೆದಿದೆ.

ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ತೀರ್ಥಹಳ್ಳಿ ನಿವಾಸಿ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತಿದ್ದ ಶಬ್ಬಿರ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗಾಯಗೊಂಡವರಲ್ಲಿ ಓರ್ವರು ಛತ್ರಕೇರಿ ನಿವಾಸಿಯಾಗಿದ್ದು, ಮತ್ತೋರ್ವರು ತೀರಳೆಬೈಲು ನಿವಾಸಿ ಎಂದು ತಿಳಿದುಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author