ಶಿವಮೊಗ್ಗ | ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ; ಜಿಲ್ಲಾ ಜನತಾದಳ ಎಚ್ಚರಿಕೆ

ಶಿವಮೊಗ್ಗ

ಶಿವಮೊಗ್ಗ, ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳ ಮಾಡಿರುವುದನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜನತಾದಳ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದ ಜನತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಹಾಲು, ಮೊಸರು, ತುಪ್ಪ, ಬೆಣ್ಣೆ ಹಾಗೂ ಪನೀರ್ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯನ್ನು ₹8 ರಿಂದ ₹35 ರವರೆಗೆ ಏರಿಕೆ ಮಾಡಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಬಿದ್ದಿದೆ ಎಂದು ಜೆಡಿಎಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಹಾಲಿನ ಉತ್ಪನ್ನಗಳ ದರ ಏರಿಕೆಯನ್ನು ತಕ್ಷಣ ಹಿಂಪಡೆದು ಮರುಪರಿಶೀಲಿಸಬೇಕು, ಬಸ್ ಪ್ರಯಾಣ ದರ ಹೆಚ್ಚಳ ತಡೆಯಬೇಕು, ಬರಪೀಡಿತ ರೈತರು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಘೋಷಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮನವಿ ಸಲ್ಲಿಕೆ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ ಜೆಡಿಎಸ್ಜಿಲ್ಲಾಧ್ಯಕ್ಷ ಎಂ.ಎನ್. ರಾಮಕೃಷ್ಣ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ನಗರ ಅಧ್ಯಕ್ಷ ದೀಪಕ್ ಸಿಂಗ್‌ ಸೇರಿ ಹಲವರು ಇದ್ದರು.

Author