ಶಿವಮೊಗ್ಗ, ನ್ಯಾಷನಲ್ ಹೆರಾಲ್ಡ್ ಪ್ರಕರಣವು ಕೇವಲ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಪಿತೂರಿ ಹಾಗೂ ಕಾನೂನು ಬಾಹಿರ ಪ್ರಕರಣ ಎಂಬುದಾಗಿ ಸಾಬೀತಾದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ದಿನಾಂಕ 18-12-2025ರ ನಾಳೆ ಗುರುವಾರದಂದು ಶಿವಮೊಗ್ಗ ನಗರದ ಅಂಬೇಡ್ಕರ್ ವೃತ್ತ ( ಜೈಲ್ ಸರ್ಕಲ್) ಬಿಜೆಪಿ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಶಾಸಕರು ಮಾಜಿ ಶಾಸಕರು 2023ರ ಅಭ್ಯರ್ಥಿಗಳು ಕೆಪಿಸಿಸಿಯ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು ಭಾಗವಿಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿವಾನಂದರವರು ಮನವಿ ಮೂಲಕ ತಿಳಿಸಿದ್ದಾರೆ.



