ಚಿಕ್ಕಮಗಳೂರು, ಬೆಂಗಳೂರಿನಿಂದ ಕುದುರೆಮುಖ ಟ್ರಕ್ಕಿಂಗ್‌ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಳಸ ಸಮೀಪದ ಕೆಟೆಗಾನೆ ತಿರುವಿನಲಿ ಪತ್ನಿಯಾದ ಘಟನೆ ಮುಂಜಾನೆ 5 ರ ಸುಮಾರಿಗೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಳೀಯರು ಮತ್ತು ಪೊಲೀಸರು ಸ್ಥಳೆಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು.
ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.



