ಚಿತ್ರದುರ್ಗದ ಸಮೀಪದಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ 9 ಜನ ಸಜೀವ ದಹನವಾಗಿದ್ದಾರೆ.
ಶಿವಮೊಗ್ಗದ ಇಬ್ಬರು ಪ್ರಯಾಣಿಕರಾದ ಮುಸರುತ್ತಿನ್ನಿಸ ಹಾಗೂ ಸಯ್ಯದ್ ಜಮೀರ್ ಗೌಸ್ ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದ್ದು ಡಿವೈಡರ್ ದಾಟಿ ಬಂದು ಡಿಕ್ಕಿ ಹೊಡೆದಿದೆ.ಚಿತ್ರದುರ್ಗದ ಸಮೀಪದಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ 9 ಜನ ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದ್ದು ಡಿವೈಡರ್ ದಾಟಿ ಬಂದು ಡಿಕ್ಕಿ ಹೊಡೆದಿದೆ.
ಸದ್ಯದ ಮಾಹಿತಿ ಪ್ರಕಾರ 9 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮೃತರೆಲ್ಲರೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರೇ ಆಗಿದ್ದು, ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿರುವುದಾಗಿ ವರದಿಯಾಗಿದೆ. ಮೃತಪಟ್ಟವರ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಬೆಂಗಳೂರು ನಿಂದ ಹೊರಟಿದ್ದ ಬಸ್ ಚಿತ್ರದುರ್ಗ, ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿತ್ತು ಬಹುತೇಕ ಬಸ್ ಪ್ರಯಾಣಿಕರು ಕುಮಟ ಮತ್ತು ಗೋಕರ್ಣ ಮೂಲದವರು ಎಂದು ಹೇಳಲಾಗಿದೆ.
ಬಸ್ ನಲ್ಲಿ 29 ಪ್ರಯಾಣಿಕರಿದ್ದರು ಎನ್ನಲಾಗಿದ್ದು ಬಸ್ ಬೆಂಕಿಗೆ ಸಿಲುಕುತ್ತಿದ್ದಂತೆ 21 ಕ್ಕೂ ಹೆಚ್ಚು ಜನ ಬಸ್ಸಿನಿಂದ ಹೊರಬಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಐಜಿಪಿ ರವಿಕಾಂತೆ ಗೌಡ, ಚಿತ್ರದುರ್ಗ ಎಸ್ ಪಿ ರಂಜಿತ್ ಕುಮಾರ್ , ತುಮಕೂರು ಎಸ್ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



