ಶಿವಮೊಗ್ಗ :ನಗರದ ಸಿದ್ದೇಶ್ವರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಮನೆಗಳಿಗೆ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಪೋಟದ ತೀವ್ರತೆಗೆ ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಬಾಡಿಗೆದಾರರು ಕಡುಬಡವರಾಗಿದ್ದು, ಬದುಕು ದುಸ್ತರವಾಗಿದೆ.
ಈ ಸಂದರ್ಭದಲ್ಲಿ ಕೂಡಲೇ ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೂಕ್ತ ಪರಿಹಾರವನ್ನು ವಿಳಂಬವಿಲ್ಲದೆ ವಿತರಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಂಕಷ್ಟದಲ್ಲಿರುವ ಈ ಕುಟುಂಬಗಳಿಗೆ ಮೊದಲ ಆದ್ಯತೆಯಾಗಿ ತಾತ್ಕಾಲಿಕ ನೆರವು ಮತ್ತು ಉಳಿದುಕೊಳ್ಳುವ ವ್ಯವಸ್ಥೆಯನ್ನು ಮಾಡಲು ತಿಳಿಸಿದರು.

ಈ ಭೇಟಿಯ ಸಮಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಜ್ಞಾನೇಶ್ವರ್ ಹಾಗೂ ಶ್ರೀ ನಾಗರಾಜ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಪ್ರಭಾಕರ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದು ಸಂತ್ರಸ್ತರಿಗೆ ಧೈರ್ಯ ತುಂಬಿದರು.



