ಶಿವಮೊಗ್ಗ-ಸೊರಬ-ಬನವಾಸಿ-ಶಿರಸಿ ನಡುವೆ ಗ್ರಾಮೀಣ ಭಾಗಕ್ಕೆ ಸಂಪರ್ಕ ಕಲ್ಪಿಸುವ ಎರಡು ಸಾರಿಗೆ ಸಂಸ್ಥೆ ಬಸ್ ಗಳಿಗೆ ಮಧು ಬಂಗಾರಪ್ಪ ಚಾಲನೆ ನೀಡಿದರು.
ಗ್ರಾಮೀಣರ ಬೇಡಿಕೆ ಹಿನ್ನೆಲೆಯಲ್ಲಿ ಸೊರಬ ಕ್ಷೇತ್ರಕ್ಕೆ ಶೀಘ್ರ ಇನ್ನೂ 15 ಸಾರಿಗೆ ಸಂಸ್ಥೆ ಬಸ್ ಗಳ ಬಿಡಲಾಗುವುದು ಎಂದರು.
ಜನವರಿ ಅಂತ್ಯದ ವೇಳೆಗೆ ರಾಜ್ಯದ ಎಲ್ಲ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.



