BREAKING NEWS ಕಲ್ಬುರ್ಗಿ | ಐಎಎಸ್ ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ

ಕರ್ನಾಟಕ ಕಲ್ಬುರ್ಗಿ

ಕಲ್ಬುರ್ಗಿ ಐಎಎಸ್ ಅಧಿಕಾರಿ ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು.

ಜೇವರ್ಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.ರಸ್ತೆ ಅಪಘಾತದಲ್ಲಿ ಮಹಾಂತೇಶ ಬೀಳಗಿ ಸ್ಥಿತಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದ ಆಸ್ಪತ್ರೆಗೆ ದಾಖಲಿಸಲಾಗಿತ್ತು ರಾಮದುರ್ಗದಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಇನ್ನೋವಾ ಕಾರ್ ಪಲ್ಟಿಇನ್ನೊವಾ ಕಾರ್ ನಲ್ಲಿದ್ದ ಮಹಾಂತೇಶ ಬೀಳಗಿ ಹಾಗೂ ಇನ್ನಿಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಮಹಾಂತೇಶ ಬೀಳಗಿ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು ಕಲಬುರಗಿ ಮಣ್ಣೂರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಲಬುರಗಿ ಡಿಸಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್ಡಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮಹಾಂತೇಶ ಬೀಳಗಿ ಜೊತೆ ಮೃತರಿಬ್ಬರೂ ಅವರ ಸಹೋದರ ಸಂಬಂಧಿಗಳು ಶಂಕರ್ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟಿದ್ದಾರೆ.ಇನ್ನೋಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ.

ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು, ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ, ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ.

ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಾರಿನಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಐದು ಜನ ಇದ್ದು, ಘಟನೆಯಲ್ಲಿ ಮೂವರು ಸಹೋದರರು ದುರಂತ ಅಂತ್ಯಕಂಡಿದ್ದಾರೆ.

ಇನ್ನು ಮಹಾಂತೇಶ್ ಬೀಳಗಿ ಅವರು ಹಿರಿಯ ಐಎಎಸ್ ಅಧಿಕಾರಿಯಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Author