ಶಿವಮೊಗ್ಗ, ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.ಅರುಣ್ (26) ಎಂಬ ಯುವಕ ಕೊಲೆಯಾದವನು ಎಂದು ಗುರುತಿಸಲಾಗಿದೆ.
ನಗರದ ಎಪಿಎಂಸಿ ತರಕಾರಿ ಮಾರ್ಕೆಟ್ ಎದುರಿನ ಶ್ರೀನಿಧಿ ವೈನ್ ಶಾಪ್ ಮುಂದೆ ನಿಂತಿದ್ದ ಯುವಕನಿಗೆ ರಾಡಿನಿಂದ ಹಲ್ಲೆ ನಡೆಸಲಾಗಿದ್ದು ಯುವಕ ಸ್ಥಳದಲ್ಲಿಯೇ ಸಾವುಕಂಡಿರುವ ಘಟನೆ ವರದಿಯಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಮೃತ ಯುವಕನ ಮೇಲೆ ನಡೆದ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಪ್ರಮುಖ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಮುಂದುವರಿದಂತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



