ಶಿವಮೊಗ್ಗ | ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

ಶಿವಮೊಗ್ಗ

ಶಿವಮೊಗ್ಗ:ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅವರು ಜ. 02 ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಹಾಗೂ ಗೌರವ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕಾರದ ನಂತರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಯೋಜನೆಗಳು ಹಾಗೂ ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಿದರು.

Author