ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಇಂದು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ವತಿಯಿಂದ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾನ್ಯ ಸಂಸದರಾದ ಶ್ರೀ ಬಿ. ವೈ.ರಾಘವೇಂದ್ರ ಅವರು ಮಾತನಾಡಿದರು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು ಎಂದರು.
ನೂತನವಾಗಿ ಅಧಿಕಾರ ಸ್ವೀಕರಿಸಿದ ಪದಾಧಿಕಾರಿಗಳಿಗೆ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಶಿಕಾರಿಪುರ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರು ಆದ ಶ್ರೀ ಬಿ.ವೈ. ವಿಜಯೇಂದ್ರ ಅವರು ಸೇರಿದಂತೆ, ಸಂಘದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಚಂದ್ರಶೇಖರ್ ಎಸ್.ಬಿಜೆಪಿ ಜಿಲ್ಲಾ ಮಾಧ್ಯಮಪ್ರಮುಖ್



